ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಅವರು ಇಂದು (ನವೆಂಬರ್ 13) ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡುತ್ತಿದ್ದು, ರಾಜ್ಯದಲ್ಲಿ ಬರೋಬ್ಬರಿ ₹15,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿರುವ 'ನಮ್ಮ ಮೆಟ್ರೋ' ಪಿಂಕ್ ಲೈನ್‌ನ (Pink Metro) ಎಲಿವೇಟೆಡ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಇಂದು ಹಸಿರು ನಿಶಾನೆ ತೋರಲಿದ್ದಾರೆ ಮೋದಿ ಗುಂಟೆಪಾಳ್ಯ ಮೆಟ್ರೋ ನಿಲ್ದಾಣಕ್ಕೆ (ತಾವರೆಕೆರೆ) ಪ್ರಧಾನಿ ಮೋದಿ ಅವರು ಆಗಮಿಸಿ ರೈಲಿನಲ್ಲಿ ಐಐಎಂಬಿವರೆಗೆ ಪ್ರಯಾಣಿಸಲಿದ್ದಾರೆ. ಪ್ರಧಾನಿ ಜೊತೆಗೆ ರಾಜ್ಯಪಾಲರಾದ ಸುಧಾ ಯಾದವ್, ಸಿಎಂ ಡಿ.ಕೆ.ಶಿವಕುಮಾರ್, ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ, ಬಿಎಂಅರ್‌ಸಿಎಲ್ ಉನ್ನತಾಧಿಕಾರಿಗಳು ಮೆಟ್ರೋ ಉದ್ಘಾಟನಾ ರೈಲಿನಲ್ಲಿ ಸಂಚರಿಸಲಿದ್ದಾರೆ. ಶಾಲಾ ವಿದ್ಯಾರ್ಥಿಗಳು, ಮೆಟ್ರೊದ ಮಹಿಳಾ ಅಧಿಕಾರಿಗಳಿಗೂ ಪ್ರದಾನಿ ಜೊತೆ ಸಂಚಾರಕ್ಕೆ ಅವಕಾಶ